ಎತ್ತಿನ ಹೊಳೆ ಕಾಮಗಾರಿ ಚುರುಕುಗೊಳಿಸಿ: ಅಧಿಕಾರಿಗಳಿಗೆ ಸಚಿವ ಶಿವಕುಮಾರ್ ಸೂಚನೆ
Posted by editor on

ಹಾಸನ: ಎತ್ತಿನ ಹೊಳೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಇದೇ ರೀತಿ ಹೆಚ್ಚಿನ ವಿಷಯಗಳನ್ನು ತಿಳಿದುಕೊಳ್ಳಲು ಕೂಡಲೇ ಇಲ್ಲಿ ಕ್ಲಿಕ್ಕಿಸಿ ಟೆಲಿಗ್ರಾಂ ಚಾನಲ್‌ಗೆ ಸೇರಿಕೊಳ್ಳಿ.
ಹಾಸನ ಜಿಲ್ಲೆ ಸೇರಿದಂತೆ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಭಾಗಗಳಿಗೆ ನೀರು ಹರಿಸುವ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆ ಪ್ರದೇಶಕ್ಕೆ ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಮಾತನಾಡಿದರು. ಮಲೆನಾಡಲ್ಲಿ ಆರು ತಿಂಗಳು ಮಳೆಯಾಗುವುದರಿಂದ ನಿರ್ದಿಷ್ಟ ಸಮಯದಲ್ಲಿ ಕಾಮಗಾರಿ ಮುಗಿಸಲು ಸಾಧ್ಯವಾಗುವುದಿಲ್ಲ. ಆದರೂ ಮುಂದಿನ ದಿನಗಳಲ್ಲಿ ತ್ವರಿತವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಲು ಸೂಚನೆ ನೀಡಿದ್ದೇನೆ ಎಂದರು. ಜಲ ಸಂಪನ್ಮೂಲ ಸಚಿವನಾಗಿ ಈಗ ತಾನೇ ಕಣ್ಣು ಬಿಡುತ್ತಿದ್ದೇನೆ. ಎತ್ತಿನಹೊಳೆ ಬಗ್ಗೆ ಕೂಡ ನನಗೆ ಸಂಪೂರ್ಣ ಮಾಹಿತಿಯಿಲ್ಲ. ಈಗ ಸಂಬಂಧಪಟ್ಟವರಿಂದ ಮಾಹಿತಿ ಪಡೆದಿದ್ದೇನೆ. ಮುಂದಿನ ದಿನಗಳಲ್ಲಿ ಮತ್ತೆ ಅಧಿಕಾರಿಗಳ ಸಭೆ ಕರೆದು ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದರು. ದುಬಾರಿ ವೆಚ್ಚದಲ್ಲಿ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಆದರೆ ಕಾಲುವೆಗೆ ಪಂಪ್ ಸೆಟ್ ಹಾಕಿ ಕೆಲವರು ನೀರು ಕದಿಯುತ್ತಾರೆ. ಈ ಬಗ್ಗೆ ಎಚ್ಚರವಿರಬೇಕು. ನಿಮ್ಮ ಕೈಲಾಗದಿದ್ದರೆ ನಾನು ಪರ್ಯಾಯ ಮಾರ್ಗ ಹುಡುಕುತ್ತೇನೆ ಎಂದು ಅಧಿಕಾರಿಗಳಿಗೆ ಸೂಚಿಸಿದರು. ಇದಕ್ಕೂ ಮುನ್ನ ಸಕಲೇಶಪುರದ ಖಾಸಗಿ ಹೋಟೆಲ್ ನಲ್ಲಿ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದರು. ಮಳೆಯ ನಡುವೆಯೂ ಅಂಗರಕ್ಷಕರ ಸಹಾಯವಿಲ್ಲದೆ ಸಚಿವ ಶಿವಕುಮಾರ್ ಒಬ್ಬರೇ ಕೆಲವು ಸ