ಲೋಕಸಭಾ ಚುನಾವಣೆಗೆ ಕೈ ತಯಾರಿ, ಸೋತ ಅಭ್ಯರ್ಥಿಗಳ ಜೊತೆ ಪ್ರಮುಖರ ಸಭೆ
Posted by editor on

ಲೋಕಸಭಾ ಚುನಾವಣೆ ಸಂಬಂಧ ಸೋಮವಾರ ಶಾಸಕಭವನ-2ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಪರಾಭವಗೊಂಡ ಕಾಂಗ್ರೆಸ್ ಶಾಸಕರೊಂದಿಗೆ ಸಭೆ ನಡೆಸಲಾಯಿತು. ಸಭೆಯಲ್ಲಿ ಡಿಸಿಎಂ ಡಾ.ಜಿ. ಪರಮೇಶ್ವರ, ಪರಾಭವಗೊಂಡ ಶಾಸಕರಿಗೆ ಧೈರ್ಯ ತುಂಬಿದರು.
ಇದೇ ರೀತಿ ಹೆಚ್ಚಿನ ವಿಷಯಗಳನ್ನು ತಿಳಿದುಕೊಳ್ಳಲು ಕೂಡಲೇ ಇಲ್ಲಿ ಕ್ಲಿಕ್ಕಿಸಿ ಟೆಲಿಗ್ರಾಂ ಚಾನಲ್‌ಗೆ ಸೇರಿಕೊಳ್ಳಿ.
ರಾಜಕೀಯ ಬೆಳವಣಿಗೆಯಿಂದಾಗಿ ಗೆಲ್ಲುವ ಶಾಸಕರು ಸಹ ಕಡಿಮೆ ಅಂತರದಲ್ಲಿ ಪರಾಭವಗೊಂಡಿದ್ದಾರೆ. ಹಾಗೆಂದು ನಿರಾಶಭಾವ ತಳೆಯಬೇಡಿ. ಪಕ್ಷ ಹಾಗೂ ಕಾರ್ಯಕರ್ತರು ಸದಾ ನಿಮ್ಮೊಂದಿಗಿದ್ದಾರೆ ಎಂದು ಆತ್ಮವಿಶ್ವಾಸ ತುಂಬಿದರು. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸದೃಢಗೊಂಡು, ವಿಧಾನಸಭಾ ಚುನಾವಣೆಯಲ್ಲಿ ಆದ ಅಷ್ಟೂ ನಷ್ಟವನ್ನು ತುಂಬಬೇಕಿದೆ. ಈ ನಿಟ್ಟಿನಲ್ಲಿ ಎಲ್ಲರೂ ಸಕ್ರಿಯರಾಗುವಂತೆ ಸಲಹೆ ನೀಡಿದರು. ಸಭೆಯಲ್ಲಿ ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ನಿಯೋಜಿತ ಅಧ್ಯಕ್ಷ ದಿನೇಶ್ ಗುಂಡೂರಾವ್, ನಿಯೋಜಿತ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಕಾಗೋಡು ತಿಮ್ಮಪ್ಪ ಉಪಸ್ಥಿತರಿದ್ದರು.