ಪ್ರಧಾನಿ ಮೋದಿ ಉತ್ತಮ ನಾಟಕಕಾರ: ಸಿದ್ದರಾಮಯ್ಯ ಲೇವಡಿ
Posted by editor on

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಒಬ್ಬ ನಾಟಕಕಾರ. ಅಂತಹ ನಾಟಕಕಾರರನ್ನು ನಾನು ನೋಡಿಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿಯಾಡಿದರು.
ಇದೇ ರೀತಿ ಹೆಚ್ಚಿನ ವಿಷಯಗಳನ್ನು ತಿಳಿದುಕೊಳ್ಳಲು ಕೂಡಲೇ ಇಲ್ಲಿ ಕ್ಲಿಕ್ಕಿಸಿ ಟೆಲಿಗ್ರಾಂ ಚಾನಲ್‌ಗೆ ಸೇರಿಕೊಳ್ಳಿ.
ವಸಂತನಗರದ ಗುರುನಾನಕ್ ಭವನದಲ್ಲಿ ಹಮ್ಮಿಕೊಂಡಿದ್ದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಆದರೆ ಬರೀ ಮಾತುಗಳಿಂದ ಜನರನ್ನು ಹೆಚ್ಚು ದಿನ ಮರಳು ಮಾಡಲು ಸಾಧ್ಯವಿಲ್ಲ. ಏಕೆಂದರೆ ಜನರಿಗೆ ಬೇಕಾಗಿರುವುದು ಕಾಮ್ ಕೀ ಬಾತ್. ಮನ್ ಕೀ ಬಾತ್ ಅಲ್ಲವೇ ಅಲ್ಲ ಎಂದು ತಿಳಿಸಿದರು. ಕೇಂದ್ರ ಸರ್ಕಾರದಿಂದ ಕಳೆದ ಐದು ವರ್ಷದಲ್ಲಿ ರಾಜ್ಯದ ರೈತರಿಗೆ ಹೆಚ್ಚು ಅನ್ಯಾಯವಾಗಿದೆ. ರೈತರ ವಿಚಾರದಲ್ಲಿ ಹಲವಾರು ಬಾರಿ ಬರೆದ ಪತ್ರಗಳಿಗೆ ಪ್ರಧಾನಿಯವರಿಂದ ಉತ್ತರವೇ ಬರಲಿಲ್ಲ. ಇನ್ನೂ ಕೇಂದ್ರದ ಕಾರ್ಯಕ್ರಮಗಳೆಲ್ಲ ಬೋಗಸ್. ಅದರಿಂದ ಜನರಿಗೆ ಯಾವುದೇ ಪ್ರಯೋಜನವಾಗಿಲ್ಲ. ಚುನಾವಣೆ ಪೂರ್ವದಲ್ಲಿ ನರೇಂದ್ರ ಮೋದಿಯವರು ಘೋಷಿಸಿದ್ದ ಕಾರ್ಯಕ್ರಮಗಳನ್ನು ಜಾರಿ ಮಾಡಲೇಯಿಲ್ಲ. ಯಾವ ಯಾವ ವಿಷಯದಲ್ಲಿ ಅವರು ಯೂ ಟರ್ನ್ ತೆಗೆದುಕೊಂಡರು ಎಂಬುದನ್ನು ನಾವು ಜನರಿಗೆ ವಿವರಿಸುವ ಕೆಲಸ ಮಾಡಬೇಕು ಎಂದರು. ಚುನಾವಣೆ ಸಂದರ್ಭದಲ್ಲಿ ನರೇಂದ್ರ ಮೋದಿಯವರು ಇಲ್ಲಿಗೆ ಬಂದು ನಮ್ಮ ಸರ್ಕಾರವನ್ನು ಪರ್ಸಂಟೇಜ್ ಸರ್ಕಾರ ಎಂದು ಟೀಕಿಸಿದರು. ಆದರೆ ಲೋಕಪಾಲ ಮಸೂದೆ ಕುರಿತು ಈವರೆಗೆ ಚಕಾರ ಎತ್ತಿಲ್ಲ. ಒಟ್ಟಾರೆ ಬಿಜೆಪಿ ಸಮಾಜಕ್ಕೆ ಶಾಪ. ಲೋಕಸಭೆ ಚುನಾವಣೆಯಲ್ಲಿ ಆ ಪಕ್ಷವನ್ನು ಸೋಲಿಸುವುದೇ ನಮ್ಮ ಗುರಿಯಾಗಬೇಕು ಎಂದರು.