ಕೆಪಿಸಿಸಿಗೆ ಡಿಕೆಶಿ ಸಾರಥ್ಯ, ಸಿದ್ದು ಸೂತ್ರಕ್ಕೆ ಹೈಕಮಾಂಡ್ ಅಸ್ತು
Posted by editor on

ಬಹಳ ದಿನಗಳಿಂದ ಆಂತರಿಕ ಹಗ್ಗ ಜಗ್ಗಾಟಕ್ಕೆ ಕಾರಣವಾಗಿದ್ದ ಕೆಪಿಸಿಸಿ ಅಧ್ಯಕ್ಷರ ನೇಮಕ ವಿಚಾರಕ್ಕೆ ಕಾಂಗ್ರೆಸ್ ಹೈಕಮಾಂಡ್ ತೆರೆ ಎಳೆದಿದ್ದು, ಅಂತಿಮವಾಗಿ ಡಿ.ಕೆ. ಶಿವಕುಮಾರಗೆ ಅಧ್ಯಕ್ಷ ಪಟ್ಟ ಒಲಿದಿದೆ.
ಇದೇ ರೀತಿ ಹೆಚ್ಚಿನ ವಿಷಯಗಳನ್ನು ತಿಳಿದುಕೊಳ್ಳಲು ಕೂಡಲೇ ಇಲ್ಲಿ ಕ್ಲಿಕ್ಕಿಸಿ ಟೆಲಿಗ್ರಾಂ ಚಾನಲ್‌ಗೆ ಸೇರಿಕೊಳ್ಳಿ.
ಇದೇ ವೇಳೆ, ಸಿಎಲ್ಪಿ ಮತ್ತು ಪ್ರತಿಪಕ್ಷದ ನಾಯಕ ಹಾಗು ಕಾರ್ಯಾಧ್ಯಕ್ಷರ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಸೂತ್ರಕ್ಕೂ ಕಾಂಗ್ರೆಸ್ ವರಿಷ್ಠರು ಅಸ್ತು ಅಂದಿದ್ದು, ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ ಹಾಗು ಸಲೀಂ ಅಹ್ಮದ್ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ. ಒಕ್ಕಲಿಗ, ಲಿಂಗಾಯತ, ಹಿಂದುಳಿದ ಹಾಗು ಅಲ್ಪಸಂಖ್ಯಾತ ವರ್ಗಗಳನ್ನು ಸಮಾಧಾನಪಡಿಸುವ ಕೆಲಸ ಮಾಡಿದೆ.