India Post

ಹಣ್ಣು, ತರಕಾರಿ ನೇರ ಖರೀದಿಗೆ ಸರ್ಕಾರವೇ ಮುಂದಾಗಲಿ: ಸಿದ್ದರಾಮಯ್ಯ

Posted by editor on
1st Image

ಬೆಂಗಳೂರು : ಕರೋನಾ ಸೋಂಕು ಹರಡುವಿಕೆ ತಡೆಯಲು ವಿಧಿಸಿರುವ ನಿರ್ಬಂಧದಿಂದಾಗಿ ರೈತ ಸಮುದಾಯ ತೀವ್ರವಾಗಿ ಸಂಕಷ್ಟಕ್ಕೆ ಗುರಿಯಾಗಿದೆ. ಆದ್ದರಿಂದ ಕೃಷಿ ಉತ್ಪನ್ನಗಳನ್ನು ಸರ್ಕಾರವೇ ನೇರವಾಗಿ ಖರೀದಿ ಮಾಡುವ ಮೂಲಕ ಮಣ್ಣಿನ ಮಕ್ಕಳ ನೆರವಿಗೆ ಧಾವಿಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇದೇ ರೀತಿ ಹೆಚ್ಚಿನ ವಿಷಯಗಳನ್ನು ತಿಳಿದುಕೊಳ್ಳಲು ಕೂಡಲೇ ಇಲ್ಲಿ ಕ್ಲಿಕ್ಕಿಸಿ ಟೆಲಿಗ್ರಾಂ ಚಾನಲ್‌ಗೆ ಸೇರಿಕೊಳ್ಳಿ.

ರೈತರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಆ ಕುರಿತು ಸರ್ಕಾರದ ಗಮನ ಸೆಳೆಯಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಕರೆದಿದ್ದ ವಿರೋಧ ಪಕ್ಷದ ಮುಖಂಡರು ಹಾಗೂ ರೈತ ಸಂಘಟನೆಗಳ ಪ್ರಮುಖರ ಸಭೆಯಲ್ಲಿ ಮಾತನಾಡಿದರು. ಖರೀದಿ ಮಾಡುವ ಹಣ್ಣು, ತರಕಾರಿಗಳನ್ನು ಸರ್ಕಾರ ಬಡವರಿಗೆ ಉಚಿತವಾಗಿ ನೀಡಬೇಕು ಎಂದು ಆಗ್ರಹಿಸಿದರು. ರಾಜ್ಯದಲ್ಲಿ ನಿರ್ಬಂಧ ಜಾರಿಗೆ ಬಂದು 40 ದಿನಗಳಾಗುತ್ತಿದೆ. ಮತ್ತೆ ಮುಂದುವರಿಯುವುದೋ ಅಥವಾ ಇಲ್ಲವೋ ಗೊತ್ತಿಲ್ಲ. ಆದರೆ ನಿರ್ಬಂಧದಿಂದಾಗಿ ರೈತರು ಮಾತ್ರ ಸಂಕಷ್ಟದ ಸುಳಿಯಲ್ಲಿ ಸಿಲುಕಿದ್ದಾರೆ. ಖರೀದಿ ಮಾಡುವವರಿಲ್ಲದೆ ಲಕ್ಷಾಂತರ ಎಕರೆ ಪ್ರದೇಶದಲ್ಲಿ ಬೆಳೆದು ನಿಂತಿರುವ ಹಣ್ಣು, ತರಕಾರಿ ರೈತರ ಜಮೀನುಗಳಲ್ಲಿಯೇ ಕೊಳೆಯುತ್ತಿದೆ. ಸಾಗಣೆಗೂ ಸೂಕ್ತ ವ್ಯವಸ್ಥೆ ಇಲ್ಲದಂತಾಗಿದೆ. ಹೀಗಾಗಿ ಕೃಷಿ ಉತ್ಪನ್ನಗಳ ಖರೀದಿಗೆ ಸರ್ಕಾರ ಕೂಡಲೇ ಮುಂದಾಗಬೇಕು ಎಂದು ಒತ್ತಾಯಿಸಿದರು