India Post

ಬೆಳೆ ಸಾಗಿಸಲು, ಮಾರುಕಟ್ಟೆ ಸೌಲಭ್ಕ ಕಲ್ಪಿಸಲು ಸರ್ಕಾರ ವಿಫಲ: ಸಿದ್ದರಾಮಯ್ಯ ಆರೋಪ

Posted by editor on
1st Image

ಬೆಂಗಳೂರು : ಕರೋನಾ ಸೋಂಕು ಹರಡುವಿಕೆ ತಡೆಯಲು ವಿಧಿಸಿರುವ ನಿರ್ಬಂಧದಿಂದಾಗಿ ಕೃಷಿ ಉತ್ಪನ್ನಗಳನ್ನು ಜಿಲ್ಲೆಯಿಂದ ಜಿಲ್ಲೆಗೆ ಹಾಗೂ ಹೊರ ರಾಜ್ಯಗಳಿಗೆ ಸಾಗಿಸುವುದು ಕಷ್ಟವಾಗಿದೆ. ಉಚಿತವಾಗಿ ಕೊಡುತ್ತೇವೆ ಎಂದು ರೈತರು ಹೇಳಿದರೂ ಹಣ್ಣು, ತರಕಾರಿ ಕೊಂಡೊಯ್ಯಲು ಯಾರೂ ಮುಂದೆ ಬರುತ್ತಿಲ್ಲ. ಸಾಗಣೆ ಹಾಗೂ ಮಾರುಕಟ್ಟೆ ಸೌಲಭ್ಯ ಕಲ್ಪಿಸಲು ಸರ್ಕಾರ ವಿಫಲವಾಗಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಇದೇ ರೀತಿ ಹೆಚ್ಚಿನ ವಿಷಯಗಳನ್ನು ತಿಳಿದುಕೊಳ್ಳಲು ಕೂಡಲೇ ಇಲ್ಲಿ ಕ್ಲಿಕ್ಕಿಸಿ ಟೆಲಿಗ್ರಾಂ ಚಾನಲ್‌ಗೆ ಸೇರಿಕೊಳ್ಳಿ.

ರೈತರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಆ ಕುರಿತು ಸರ್ಕಾರದ ಗಮನ ಸೆಳೆಯಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಕರೆದಿದ್ದ ವಿರೋಧ ಪಕ್ಷದ ಮುಖಂಡರು ಹಾಗೂ ರೈತ ಸಂಘಟನೆಗಳ ಪ್ರಮುಖರ ಸಭೆಯಲ್ಲಿ ಮಾತನಾಡಿದರು. ಸರ್ಕಾರದ ಮಾಹಿತಿ ಪ್ರಕಾರವೇ ಈ ವರ್ಷದ ಬೇಸಿಗೆ ಋತುವಿನಲ್ಲಿ ರಾಜ್ಯದ ಉದ್ದಗಲಕ್ಕೂ ಸುಮಾರು 64,340 ಹೆಕ್ಟೇರ್ ಪ್ರದೇಶದಲ್ಲಿ 17 ಲಕ್ಷದ 38 ಸಾವಿರ ಟನ್ ಇಳುವರಿಯ ತರಕಾರಿ ಬೆಳೆಗಳಿವೆ. 1,91,895 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯುವ ಹಣ್ಣುಗಳ ಇಳುವರಿ ಅಂದಾಜು 32,55,969 ಟನ್‍ಗಳಷ್ಟಿದೆ. ವಿವಿಧ ರೀತಿಯ ಹೂಗಳನ್ನು ಸುಮಾರು 11,027 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿರುತ್ತಾರೆ. ಹಾಗೂ ಸುಮಾರು 1,08,168 ಹೆಕ್ಟೇರ್ ಪ್ರದೇಶದಲ್ಲಿ ರೇಷ್ಮೆ ಇದೆ ಅದೇ ರೀತಿ ಭತ್ತ, ರಾಗಿ, ಮುಸುಕಿನ ಜೋಳ, ಕಬ್ಬು, ನೆಲಗಡಲೆ, ಸೂರ್ಯಕಾಂತಿ, ಮುಂತಾದ ಬೆಳೆಗಳನ್ನು ಬೆಳೆಯಲಾಗಿದೆ. ಬೆಳೆಗಳನ್ನು ಕಟಾವು ಮಾಡಿ, ಮಾರಾಟ ಮಾಡಲು ಲಾಕ್‍ಡೌನ್ ಅವಧಿಯಲ್ಲಿ ಸಾಧ್ಯವಾಗದೆ ರೈತರು ಹಾಗೂ ರೈತ ಕಾರ್ಮಿಕರ ಬದುಕು ದುಸ್ತರವಾಗಿದೆ. ಜತೆಗೆ ಸಾವಿರಾರು ಕೋಟಿ ಬೆಳೆಗಳು ನಷ್ಠವಾಗಿರುತ್ತದೆ. ಮತ್ತೊಂದು ಕಡೆ ಹಣ್ಣು, ಹಂಪಲು, ತರಕಾರಿ, ಹೂವು ಹಾಗೂ ಇನ್ನಿತರೇ ಪದಾರ್ಥಗಳು ದಿನನಿತ್ಯ ಲಭ್ಯವಾಗದೇ ಜನರು ಪರದಾಡುತ್ತಿದ್ದಾರೆ ಎಂದರು.