ಶ್ರೀರಾಮನ ಹೆಸರಲ್ಲಿ ಬಿಜೆಪಿ ರಾಜಕೀಯಕ್ಕೆ ವಿರೋಧ: ಸಿಎಂ
Posted by editor on

ಶಿವಮೊಗ್ಗ: ಜ 22 ರ ನಂತರ ಅಯೋಧ್ಯೆಗೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಾತನಾಡಿದರು.
ಇದೇ ರೀತಿ ಹೆಚ್ಚಿನ ವಿಷಯಗಳನ್ನು ತಿಳಿದುಕೊಳ್ಳಲು ಕೂಡಲೇ ಇಲ್ಲಿ ಕ್ಲಿಕ್ಕಿಸಿ ಟೆಲಿಗ್ರಾಂ ಚಾನಲ್‌ಗೆ ಸೇರಿಕೊಳ್ಳಿ.
ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರ ನಿರ್ಮಿಸಿ ಬಿಜೆಪಿ ರಾಜಕೀಯ ಮಾಡಲು ಹೊರಟಿದೆ. ದೇವರನ್ನು ರಾಜಕೀಯವಾಗಿ ಬಿಜೆಪಿ ಬಳಸಿಕೊಳ್ಳುವುದನ್ನು ನಾವು ವಿರೋಧಿಸುತ್ತೇವೆಯೇ ಹೊರತು ಶ್ರೀ ರಾಮಚಂದ್ರನನ್ನು ಅಲ್ಲ. 22ರ ನಂತರ ಅಯೋಧ್ಯೆಗೆ ಭೇಟಿ ನೀಡುವುದಾಗಿ ಹೇಳಿದರು. ಇಡೀ ರಾಜ್ಯದಲ್ಲಿ ನಮ್ಮ ಕಾರ್ಯಕರ್ತರು ಕೂಡ ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡುತ್ತಾರೆ. ದೇವರನ್ನು ಬಳಸಿ ಬಿಜೆಪಿ ಮಾಡುತ್ತಿರುವ ರಾಜಕೀಯವನ್ನು ನಾವು ವಿರೋಧಿಸುತ್ತೇವೆ ಎಂದರು.