India Post

ಹೆಸರಿನಲ್ಲಿರುವ ರಾಮನನ್ನೇ ಸಿಎಂ ಮರೆತ್ತಿದ್ದಾರೆ: ಬಸವರಾಜ ಬೊಮ್ಮಾಯಿ

Posted by editor on
1st Image

ಹುಬ್ಬಳ್ಳಿ: ಸಿದ್ದರಾಮಯ್ಯಗೆ ತಡವಾಗಿಯಾದರೂ ಬುದ್ಧಿ ಬಂದಿದೆ. ಅವರ ಹೆಸರಲ್ಲಿಯೇ ರಾಮ ಇದ್ದಾನೆ. ಅಧಿಕಾರದ ರಾಜಕಾರಣಕ್ಕಾಗಿ ತಮ್ಮ ಹೆಸರಿನಲ್ಲಿರುವ ರಾಮನನ್ನೇ ಅವರು ಕಡೆಗಣಿಸಿದರು ಎಂದು ಬಸವರಾಜ ಬೊಮ್ಮಾಯಿ ಟೀಕಿಸಿದರು.

ಇದೇ ರೀತಿ ಹೆಚ್ಚಿನ ವಿಷಯಗಳನ್ನು ತಿಳಿದುಕೊಳ್ಳಲು ಕೂಡಲೇ ಇಲ್ಲಿ ಕ್ಲಿಕ್ಕಿಸಿ ಟೆಲಿಗ್ರಾಂ ಚಾನಲ್‌ಗೆ ಸೇರಿಕೊಳ್ಳಿ.

ಈ ಕುರಿತು ಭಾನುವಾರ ಮಾತನಾಡಿದ ಅವರು, ಕೊನೆಗೂ ಅವರಿಗೆ ಜ್ಞಾನೋದಯವಾಗಿದೆ. ಜ. 22ರ ನಂತರ ಅಯೋಧ್ಯೆಗೆ ಹೋಗುವುದಾಗಿ ಹೇಳಿದರು. ನಂತರ ಈಗ ಹೋಗಲ್ಲ ಅಂತಿದ್ದಾರೆ. ಅವರ ಆತ್ಮಸಾಕ್ಷಿ ಹೋಗಬೇಕಂತಿದೆ. ಆದರೆ ಹೈಕಮಾಂಡ್ ಬೇಡವೆನ್ನುತ್ತಿದೆ. ಸಿದ್ದರಾಮಯ್ಯ ಗೊಂದಲದಲ್ಲಿ ಸಿಲುಕಿಕೊಂಡಿದ್ದಾರೆ. ಅವರ ಗೊಂದಲಕ್ಕೆ ಇದೇ ಸಾಕ್ಷಿ ಎಂದು ಹೇಳಿದರು.