India Post

ಸಂವಿಧಾನವೇ ನಮಗೆ ಧರ್ಮಗ್ರಂಥ: ಸಿಎಂ ಸಿದ್ದರಾಮಯ್ಯ ಪ್ರತಿಪಾದನೆ

Posted by editor on
1st Image

ತುಮಕೂರು: ಶಿವಕುಮಾರಮಹಾಶಿವಯೋಗಿ ಶ್ರೀಗಳು ಬಸವಾದಿ ಶರಣರ ಆಶಯಗಳನ್ನು ಆಚರಿಸಲು ಬದುಕನ್ನು ಮುಡಿಪಾಗಿಟ್ಟು ನುಡಿದಂತೆ ನಡೆದ ಮಹಾಯೋಗಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಕರ್ನಾಟಕ ರತ್ನ ಶತಾಯುಷಿ ಪರಮಪೂಜ್ಯ ಡಾ.ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ ಸ್ಮರಣಾರ್ಥ ನಿರ್ಮಿಸಿರುವ "ಸ್ಮೃತಿ ವನ" ವನ್ನು ಉದ್ಘಾಟಿಸಿ, ಶ್ರೀಗಳ 5 ನೇ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇದೇ ರೀತಿ ಹೆಚ್ಚಿನ ವಿಷಯಗಳನ್ನು ತಿಳಿದುಕೊಳ್ಳಲು ಕೂಡಲೇ ಇಲ್ಲಿ ಕ್ಲಿಕ್ಕಿಸಿ ಟೆಲಿಗ್ರಾಂ ಚಾನಲ್‌ಗೆ ಸೇರಿಕೊಳ್ಳಿ.

ಭಾರತ ಸಂವಿಧಾನದ ಆಶಯ ಮತ್ತು ಬಸವಾದಿ ಶರಣರ ಹೋರಾಟದ ಆಶಯ ಒಂದೇ ಆಗಿದೆ. ನಮಗೆ ಸಂವಿಧಾನ ಧರ್ಮಗ್ರಂಥ ಇದ್ದ ಹಾಗೆ. ಜನರ ಬದುಕನ್ನು ಎತ್ತಿರುವುದೇ ಈ ಸಂವಿಧಾನ ಎಂಬ ಧರ್ಮಗ್ರಂಥದ ಆಶಯ ಎಂದು ವಿವರಿಸಿದರು. ಕಾಯಕ ಮತ್ತು ದಾಸೋಹ ಎರಡೂ ಜೀವನ ಮೌಲ್ಯಗಳು. ಈ ಮೌಲ್ಯಗಳನ್ನು ಪೂಜ್ಯರು ತಮ್ಮ ಬದುಕಿನುದ್ದಕ್ಕೂ ಆಚರಿಸಿದ್ದರು‌. ಇಂದು 10 ಸಾವಿರ ಮಕ್ಕಳಿಗೆ ಮಠದಲ್ಲಿ ವಿದ್ಯೆ, ವಸತಿ, ಅನ್ನ ಪಡೆಯುತ್ತಿದ್ದಾರೆ ಎಂದರೆ ಶಿವಕುಮಾರಮಹಾಯೋಗಿಗಳ ಬದುಕಿನ ಆಚರಣೆಯೇ ಕಾರಣ ಎಂದು ಮುಖ್ಯಮಂತ್ರಿಗಳು ಅಪಾರ ಮೆಚ್ಚುಗೆ ವ್ಯಕ್ತಪಡಿಸಿದರು.