India Post

ಸಚಿವೆ ಹೆಬ್ಬಾಳಕರ್ ಸೂಚನೆ ಮೇರೆಗೆ ಮಗುವಿ ಮೇಲೆ ಹಲ್ಲೆಗೈದ ತಾಯಿ ವಿರುದ್ಧ ಎಫ್ಐಆರ್

Posted by editor on
1st Image

ಬೆಂಗಳೂರು: ಹೆತ್ತ ತಾಯಿಯೇ ತನ್ನ ಮೂರುವರೆ ವರ್ಷದ ಎಳೆಯ ಕಂದಮ್ಮನ ಮೇಲೆ ಅಮಾನುಷವಾಗಿ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸೂಚನೆ ಮೇರೆಗೆ ಬೆಂಗಳೂರಿನ ಗಿರಿನಗರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ.

ಇದೇ ರೀತಿ ಹೆಚ್ಚಿನ ವಿಷಯಗಳನ್ನು ತಿಳಿದುಕೊಳ್ಳಲು ಕೂಡಲೇ ಇಲ್ಲಿ ಕ್ಲಿಕ್ಕಿಸಿ ಟೆಲಿಗ್ರಾಂ ಚಾನಲ್‌ಗೆ ಸೇರಿಕೊಳ್ಳಿ.

ಹಲ್ಲೆಗೈದ ಶಾರಿನ್ ಎಂಬ ಮಹಿಳೆ ಮತ್ತು ಆಕೆಯ ಪ್ರಿಯಕರನ ವಿರುದ್ಧ  ಗಿರಿನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆಗೊಳಪಡಿಸಿದ್ದಾರೆ. ಹಲ್ಲೆಗೀಡಾದ ಮಗುವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ರಕ್ಷಿಸಿ, ಸದ್ಯ ಸರ್ಕಾರಿ ಶಿಶುಮಂದಿರದಲ್ಲಿ ಪಾಲನೆ ಮಾಡಲಾಗುತ್ತಿದೆ.   

ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆ ಹತ್ತಿರದ ಡಾ.ಎಂ.ಎಚ್. ಮರೀಗೌಡ ರಸ್ತೆಯಲ್ಲಿರುವ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ಆರ್.ನಾಗರತ್ನ ಹಾಗೂ ರಾಜೇಶ್ವರಿ ಅವರು ನೀಡಿದ ದೂರಿನ್ವಯ ಗಿರಿನಗರ ಪೊಲೀಸರು ಆರೋಪಿಗಳ ವಿರುದ್ಧ ಮೊಕದ್ದಮೆ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಈ ಘಟನೆಯು ಫೆಬ್ರವರಿ 20ರಂದು ಬೆಂಗಳೂರಿನ ಬನಶಂಕರಿ 3ನೇಹಂತದ ಹೊಸಕೆರೆಹಳ್ಳಿಯ ವೀರಭದ್ರನಗರದಲ್ಲಿ  ನಡೆದಿದೆ. ಆರೋಪಿ ವೀರಭದ್ರನಗರದ ಚರ್ಚ್ ರಸ್ತೆಯ ಬಾಡಿಗೆ ಮನೆಯೊಂದರಲ್ಲಿ ಇದ್ದು, ಅಪರಿಚಿತ ವ್ಯಕ್ತಿಯೊಬ್ಬ ಜತೆಗೆ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. 

ಪ್ರಿಯಕರನೊಂದಿಗೆ ಸೇರಿಕೊಂಡು ಮಗುವಿನ ಮೇಲೆ ಮನಬಂದಂತೆ ನಿರಂತರ ಹಲ್ಲೆ ನಡೆಸಿದ್ದು, ಬೆಳಗ್ಗೆ ಕೆಲಸಕ್ಕೆ ಹೋಗುವಾಗ ಮಗುವನ್ನು ಮನೆಯಲ್ಲಿ ಕೂಡಿ ಹಾಕಿದ್ದಳು. ಈ ವಿಷಯ ತಿಳಿದು ನೆರೆಹೊರೆಯವರ ದೂರಿನ್ವಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮಗುವನ್ನು ರಕ್ಷಿಸಿದ್ದರು. ಆದರೆ, ಪಾಪಿ ತಾಯಿರ ವಿರುದ್ಧ ಯಾವುದೇ ಕ್ರಮ ಆಗಿರಲಿಲ್ಲ; 

ಘಟನೆ ಕುರಿತಂತೆ ಮಾಹಿತಿ ಪಡೆದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು  ಇದೊಂದು ಅಮಾನುಷ ಕೃತ್ಯವಾಗಿದೆ. ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಸಚಿವರು, ಇಲಾಖಾಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಸೂಚನೆ ನೀಡಿದ್ದರು. ಸಚಿವರ ಆದೇಶದ ಮೇರೆಗೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ; ಮಗುವನ್ನು ರಕ್ಷಿಸಲಾಗಿದೆ.   ಹಲ್ಲೆಗೈದ ತಾಯಿ ಶಾರಿನ್ ಹಾಗೂ ಆಕೆಯ ಪ್ರಿಯಕರನ ವಿರುದ್ಧ ಗಿರಿನಗರ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡು ವಿಚಾರಣೆಗೆ ಒಳಪಡಿಸಿದ್ದಾರೆ.