India Post

ದಸರಾ ವಿಶೇಷ ಬಸ್ ಕಾರ್ಯಾಚರಣೆಗೆ ಚಾಲನೆ

Posted by editor on
1st Image

ಬೆಂಗಳೂರು: ನಾಡಹಬ್ಬ ದಸರಾ ಪ್ರಯುಕ್ತ ನಾಡಿನ ಜನತೆಗೆ ಆರಾಮದಾಯಕ, ಸುರಕ್ಷಿತ ಮತ್ತು ಬೇಡಿಕೆಯನುಸಾರ ತ್ವರಿತ ಸಾರಿಗೆ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಸೋಮವಾರ ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಮೈಸೂರು ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ದಸರಾ ವಿಶೇಷ ವಾಹನಗಳಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು.

ಇದೇ ರೀತಿ ಹೆಚ್ಚಿನ ವಿಷಯಗಳನ್ನು ತಿಳಿದುಕೊಳ್ಳಲು ಕೂಡಲೇ ಇಲ್ಲಿ ಕ್ಲಿಕ್ಕಿಸಿ ಟೆಲಿಗ್ರಾಂ ಚಾನಲ್‌ಗೆ ಸೇರಿಕೊಳ್ಳಿ.

ಮುಂದಿನ 10 ದಿನಗಳವರೆಗೆ ಮೈಸೂರು ರಸ್ತೆ ಬಸ್ ನಿಲ್ದಾಣದಲ್ಲಿ ದಸರಾ ಕ್ಯಾಂಪ್ ಇರಲಿದ್ದು, ಬೆಂಗಳೂರು ಕೇಂದ್ರೀಯ ವಿಭಾಗ, ರಾಮನಗರ, ಚಿಕ್ಕಬಳ್ಳಾಪುರ ಕೋಲಾರ ಹಾಗೂ ಮೈಸೂರು ವಿಭಾಗಗಳಿಂದ ಒಟ್ಟು 700 ಹೆಚ್ಚುವರಿ ವಾಹನಗಳನ್ನು ಬೆಂಗಳೂರು ಮೈಸೂರು‌ ನಡುವೆ ಕಾರ್ಯಾಚರಣೆ* ಮಾಡಲಾಗುತ್ತದೆ. ಇದರೊಂದಿಗೆ ಬೆಂಗಳೂರಿನಿಂದ ರಾಜ್ಯದ ವಿವಿಧ ಊರುಗಳಿಗೆ 2000 ವಿಶೇಷ ಬಸ್ಸುಗಳ ಕಾರ್ಯಾಚರಣೆ‌ ನಡೆಯಲಿದೆ. ನಿಗಮದ ಹಿರಿಯ ಅಧಿಕಾರಿಗಳು, ಬೆಂಗಳೂರು ಕೇಂದ್ರಿಯ ವಿಭಾಗ ಮತ್ತು ಕೆಂಪೇಗೌಡ ಬಸ್ ನಿಲ್ದಾಣದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಇದ್ದರು.