ಬೆಸ್ಕಾಂನಿಂದ ಮಿತ ವಿದ್ಯುತ್ ಬಳಕೆಯ ಬಿ.ಎಲ್.ಡಿ.ಸಿ. ಫ್ಯಾನ್ ಲೋಕಾರ್ಪಣೆ
Posted by editor on

ಬೆಂಗಳೂರು: ಇಂಧನ ದಕ್ಷತೆ ಹೆಚ್ಚಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ಬೆಸ್ಕಾಂ,ಕಡಿಮೆ ವಿದ್ಯುತ್ ಬಳಸುವ ಬಿ.ಎಲ್.ಡಿ.ಸಿ. ಫ್ಯಾನ್ ಅನ್ನು ಗುರುವಾರ ಲೋಕಾರ್ಪಣೆಗೊಳಿಸಿದೆ.
ಇದೇ ರೀತಿ ಹೆಚ್ಚಿನ ವಿಷಯಗಳನ್ನು ತಿಳಿದುಕೊಳ್ಳಲು ಕೂಡಲೇ ಇಲ್ಲಿ ಕ್ಲಿಕ್ಕಿಸಿ ಟೆಲಿಗ್ರಾಂ ಚಾನಲ್‌ಗೆ ಸೇರಿಕೊಳ್ಳಿ.
ಬ್ಯೂರೋ ಆಫ್ ಎನರ್ಜಿ ಎಫಿಷಿಯನ್ಸಿ (ಬಿಇಇ), ಕ್ರೆಡಲ್ ಸಹಭಾಗಿತ್ವದಲ್ಲಿ ನಡೆದ ಡಿಸ್ಕಾಂಗಳ ಸಾಮರ್ಥ್ಯಾಭಿವೃದ್ದಿ ಕಾರ್ಯಕ್ರಮದ ಭಾಗವಾಗಿ ಬೆಸ್ಕಾಂನ ಬೇಡಿಕೆ ನಿರ್ವಹಣಾ ವಿಭಾಗದ (ಡಿಎಸ್‌ಎಂ) ವತಿಯಿಂದ ಗುರುವಾರ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಿ.ಎಲ್.ಡಿ.ಸಿ. ಸೀಲಿಂಗ್ ಫ್ಯಾನ್ ಅನ್ನು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್.ಶಿವಶಂಕರ್ ಅನಾವರಣಗೊಳಿಸಿದರು. ಇಇಎಸ್‌ಎಲ್ ರಾಜ್ಯ ಮುಖ್ಯಸ್ಥ ದೀಪಕ್ ಸಹನಿ, ಬೆಸ್ಕಾಂ ತಾಂತ್ರಿಕ ನಿರ್ದೇಶಕ ಹೆಚ್.ಜೆ. ರಮೇಶ್, ಬೆಸ್ಕಾಂ ಡಿಎಸ್‌ಎಂ ಪ್ರಧಾನ ವ್ಯವಸ್ಥಾಪಕ ರಮೇಶ್ ವಿ.ಎಸ್., ಪಿಎಂಎಸ್ ನಿರ್ದೇಶಕ ಅಮೇಯ ಸುಬೋಧ್ ಉದ್ಘಾಂವ್ಕರ್, ಬೆಸ್ಕಾಂನ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. *ಬಿ.ಎಲ್.ಡಿ.ಸಿ. ಸೀಲಿಗ್ ಫ್ಯಾನ್ ಖರೀದಿ ಹೇಗೆ?* ಹೆಚ್ಎಸ್ಆರ್ ಲೇಔಟ್‌ನಲ್ಲಿನ ಬೆಸ್ಕಾಂನ ಸೆಂಟರ್ ಆಫ್ ಎಕ್ಸಲೆನ್ಸ್ ಕಚೇರಿ ಮತ್ತು ಬೆಸ್ಕಾಂ ಅಧಿಕೃತ ಜಾಲತಾಣದಲ್ಲಿನ ಇಇಎಸ್‌ಎಲ್ ಲಿಂಕ್ (https://eeslmart.in/fan?affiliateid=13285) (website link: eeslmart.in) ಮೇಲೆ ಕ್ಲಿಕ್ ಮಾಡುವುದರ ಮೂಲಕ ಆನ್‌ಲೈನ್‌ನಲ್ಲಿ ಫ್ಯಾನ್ ಖರೀದಿಸಬಹುದಾಗಿದೆ. 5 ಸ್ಟಾರ್ ಪ್ರಮಾಣೀಕೃತ ಬಿ.ಎಲ್.ಡಿ.ಸಿ. ಸೀಲಿಂಗ್ ಫ್ಯಾನ್ ಬೆಲೆ 2,699 ರೂ. ಇದೆ.