ಕೆಲಸದಾಕೆಯ ಮೇಲೆ ಅತ್ಯಾಚಾರ – ಪ್ರಜ್ವಲ್ ರೇವಣ್ಣ ದೋಷಿ: ನ್ಯಾಯಾಲಯ ತೀರ್ಪು

ಬೆಂಗಳೂರು: ಕೆ.ಆರ್.ನಗರದಲ್ಲಿ ಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
ಇದೇ ರೀತಿ ಹೆಚ್ಚಿನ ವಿಷಯಗಳನ್ನು ತಿಳಿದುಕೊಳ್ಳಲು ಕೂಡಲೇ ಇಲ್ಲಿ ಕ್ಲಿಕ್ಕಿಸಿ ಟೆಲಿಗ್ರಾಂ ಚಾನಲ್‌ಗೆ ಸೇರಿಕೊಳ್ಳಿ.
ನ್ಯಾಯಮೂರ್ತಿ ಗಜಾನನ ಭಟ್ ನೇತೃತ್ವದ ಪೀಠವು ಇಂದು ಈ ತೀರ್ಪು ಪ್ರಕಟಿಸಿದ್ದು, ತೀರ್ಪು ಘೋಷಣೆಯ ವೇಳೆ ಪ್ರಜ್ವಲ್ ರೇವಣ್ಣ ಕೋರ್ಟ್ ಹಾಲಿನಲ್ಲಿ ಹಾಜರಿದ್ದರು. ತೀರ್ಪು ಕೇಳಿದ ಬಳಿಕ ಅವರು ಕಣ್ಣೀರಿಟ್ಟರು ಎನ್ನಲಾಗಿದೆ.
ಶಿಕ್ಷೆಯ ಪ್ರಮಾಣವನ್ನು ನಾಳೆ (ಆಗಸ್ಟ್ 2, ಶನಿವಾರ) ಪ್ರಕಟಿಸಲಾಗುತ್ತದೆ. ಪ್ರಸ್ತುತ ಕಾನೂನಿನ ಪ್ರಕಾರ, ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದರೆ ಕನಿಷ್ಠ 10 ವರ್ಷದಿಂದ ಗರಿಷ್ಠ ಜೀವಾವಧಿಯವರೆಗೆ ಶಿಕ್ಷೆ ವಿಧಿಸಲು ಅವಕಾಶವಿದೆ.
ಈ ಪ್ರಕರಣದ ಕೊನೆಯ ವಿಚಾರಣೆ ಜುಲೈ 30ರಂದು ನಡೆದಿದ್ದು, ಸರ್ಕಾರದ ಪರ ವಕೀಲರಾದ ಎನ್. ಜಗದೀಶ್ ಮತ್ತು ಅಶೋಕ್ ನಾಯಕ್ ಹಾಗೂ ಪ್ರಜ್ವಲ್ ರೇವಣ್ಣ ಪರ ವಕೀಲ ಅರುಣ್ ಜಿ ಹಾಜರಿದ್ದರು.