ದೇಶದ ಸರಾಸರಿ ಜಿಎಸ್‌ಡಿಪಿಗಿಂತ ಕರ್ನಾಟಕದ ಆರ್ಥಿಕ ಪ್ರಗತಿ ಹೆಚ್ಚಳ

Posted by editor on
1st Image

ಬೆಂಗಳೂರು: ಕರ್ನಾಟಕ ಆರ್ಥಿಕ ಪ್ರಗತಿಯಲ್ಲಿ ದೇಶದಲ್ಲೇ ಉತ್ತಮ ಸಾಧನೆ ಮಾಡಿದ್ದು, 2023-24 ನೇ ಹಣಕಾಸು ಸಾಲಿನಲ್ಲಿ ಶೇ.10.2 ಜಿಎಸ್‌ಡಿಪಿ ಪ್ರಗತಿ ಸಾಧಿಸಿದೆ. ಕೇಂದ್ರ ಸಾಂಖ್ಯಿಕ ಮತ್ತು ಯೋಜನಾ ಅನುಷ್ಠಾನ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ ಈ ಅವಧಿಯಲ್ಲಿ ದೇಶದ ಸರಾಸರಿ ಜಿಎಸ್‌ಡಿಪಿ ಶೇ.8.2 ಆಗಿದೆ. ಕಳೆದ ಬಾರಿ ರಾಜ್ಯ ತೀವ್ರ ಬರಗಾಲಕ್ಕೆ ತುತ್ತಾಗಿದ್ದರೂ, ಜಾಗತಿಕವಾಗಿ ಐಟಿ ಮಾರುಕಟ್ಟೆ ಹಿನ್ನಡೆ ಅನುಭವಿಸಿದ್ದರೂ, ರಾಜ್ಯ ಉತ್ತಮ ಆರ್ಥಿಕ ಪ್ರಗತಿ ಸಾಧಿಸಿದೆ.

ನ್ಯಾಷನಲ್‌ ಸ್ಟಾಟಿಸ್ಟಿಕಲ್‌ ಎಸ್ಟಿಮೇಟ್‌ (ಎನ್‌ಎಸ್‌ಸಿ) ಆರಂಭದಲ್ಲಿ ಶೇ. 4 ಕರ್ನಾಟಕದ ಜಿಎಸ್‌ಡಿಪಿ ಅಭಿವೃದ್ಧಿ ದರ ಅಂದಾಜಿಸಿತ್ತು. ಆದರೆ ಹಣಕಾಸು ವರ್ಷದ ಅಂತ್ಯಕ್ಕೆ ರಾಜ್ಯದ ಅಭಿವೃದ್ದಿ ದರ ಶೇ.13.1 ಆಗಿದ್ದು, ಎನ್‌ಎಸ್‌ಸಿ ಕರ್ನಾಟಕದ ಪ್ರಗತಿಯನ್ನು ತಪ್ಪಾಗಿ ಅಂದಾಜಿಸಿರುವುದು ಸ್ಪಷ್ಟವಾಗಿದೆ. ರಾಜ್ಯದಲ್ಲಿ ಬರಗಾಲ ಪರಿಸ್ಥಿತಿಯಿಂದಾಗಿ ಕೃಷಿ ವಲಯದ ಅಭಿವೃದ್ದಿ ಉದ್ದೇಶಿತ ಪ್ರಮಾಣದಲ್ಲಿ ಸಾಧ್ಯವಾಗಿಲ್ಲ. ಕರ್ನಾಟಕದ ಜಿಎಸ್‌ವಿಎ ಅಂದರೆ ಒಟ್ಟು ಆರ್ಥಿಕತೆಯಲ್ಲಿ ಐಟಿ ಮತ್ತು ಹಾರ್ಡ್‌ವೇರ್‌ ವಲಯದ ಪಾಲು ಶೇ.28 ಇದ್ದು, ಜಾಗತಿಕ ಆರ್ಥಿಕ ಹಿಂಜರಿತದಿಂದಾಗಿ ಈ ವಲಯ ಜಾಗತಿಕವಾಗಿ ಹಿನ್ನಡೆ ಅನುಭವಿಸಿದೆ. ಭಾರತದ ಐಟಿ ವಲಯ 2022ರ ಹಣಕಾಸು ಸಾಲಿನಲ್ಲಿ ಶೇ.15.5 ಪ್ರಗತಿ ಕಂಡದ್ದು, 2023ರ ಅವಧಿಯಲ್ಲಿ ಶೇ.8ಕ್ಕೆ ಕುಸಿತ ಅನುಭವಿಸಿದೆ. ಆದರೆ ಉತ್ತಮ ಆಡಳಿತ ಮತ್ತು ಬಹುವಲಯಗಳ ಅಭಿವೃದ್ಧಿಯಿಂದಾಗಿ ರಾಜ್ಯದ ಆರ್ಥಿಕತೆ ಸ್ಥಿರವಾಗಿರುವುದು ಕಂಡು ಬಂದಿದೆ. 2024-25ನೇ ಹಣಕಾಸು ಸಾಲಿಗೆ ಎನ್‌ಎಸ್ಸಿ ರಾಜ್ಯಕ್ಕೆ ಶೇ.9.4 ಜಿಎಸ್‌ಡಿಪಿ ಪ್ರಗತಿಯನ್ನು ಅಂದಾಜಿಸಿದ್ದು, ಇದು ರಾಷ್ಟ್ರೀಯ ಸರಾಸರಿ ಶೇ.10.5ಕ್ಕಿಂತ ಸ್ವಲ್ಪ ಕಡಿಮೆಯಾಗಿದೆ. ಆದರೆ ಹಣಕಾಸು ಸಚಿವಾಲಯ ವಿವಿಧ ಆರ್ಥಿಕ ಚಟುವಟಿಕೆಗಳನ್ನು ಗಮನದಲ್ಲಿರಿಸಿ ಈ ಅವಧಿಯಲ್ಲಿ ಕರ್ನಾಟಕದ ಜಿಎಸ್‌ಡಿಪಿ ದರವನ್ನು ಶೇ.14 ಅ