ಕಾಬೂಲ್ ಬಾಂಬ್ ಸ್ಫೋಟಕ್ಕೆ 7 ಬಲಿ, 327 ಜನರಿಗೆ ಗಾಯ
Posted by gugri on in Category
08
49

ಆಫ್ಘಾನಿಸ್ಥಾನದ ರಾಜ್ಯಧಾನಿ ಕಾಬೂಲ್ ನಲ್ಲಿ ಬೆಳ್ಳಂಬೆಳ್ಳಿಗ್ಗೆ ಭೀಕರವಾಗಿ ಸಂಭವಿಸಿದ ಬಾಂಬ್ ಸ್ಫೋಟಕ್ಕೆ 7 ಜನರು ಬಲಿಯಾಗಿದ್ದು, 327ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ಸ್ಪಷ್ಟಪಡಿಸಿವೆ.
ಈ ಘಟನೆಯಲ್ಲಿ ಮೃತಪಟ್ಟವರಿಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಅಧ್ಯಕ್ಷ ಅಶ್ರಫ್ ಘನಿ, ಇದೊಂದು ಬಧ್ರತಾ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ನಡೆಸಿದ ಘಟನೆ. ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.
ಇದರ ಮಧ್ಯ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ತಾಲಿಬಾನ್ ಸಂಘಟನೆ ವಕ್ತಾರ ಜಬಿಹುಲ್ಲಾ ಮುಜಾಹಿದ್, ಈ ಘಟನೆ ನಡೆಸಿದ್ದು ತಾವೇ ಎಂದು ಹೇಳಿಕೊಂಡರೂ ಸರ್ಕಾರದಿಂದ ಯಾವುದೇ ಸ್ಪಷ್ಟನೆ ಹೊರಬಿದ್ದಿಲ್ಲ.