ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಕಳ್ಳತನದ ಆರೋಪಿ, ಪೊಲೀಸರಿಂದ ಶೂಟೌಟ್
Posted by editor on in Category
08
49

ಪೊಲೀಸ್ ಸಿಬ್ಬಂದಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗೆ ಗುಂಡು ಹಾರಿಸಿದ ಘಟನೆ ಚನ್ನಪಟ್ಟಣ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಚನ್ನಪಟ್ಟಣ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕೆಎಚ್ ಬಿ ಕಾಲೋನಿಯಲ್ಲಿ ಇತ್ತೀಚೆಗೆ ಮನೆಗೆ ನುಗ್ಗಿ ಸುಲಿಗೆ ಮಾಡಿದ ಘಟನೆ ನಡೆದಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ವಿಶೇಷ ತಂಡಗಳನ್ನು ರಚಿಸಿ, ಡಿ ಎಸ್ ಪಿ ಓಂ ಪ್ರಕಾಶ್ ನೇತೃತ್ವದಲ್ಲಿ ತನಿಖಾಧಿಕಾರಿ ವಸಂತ ಕುಮಾರ್ ರವರು ಮುಖ್ಯ ಆರೋಪಿ ರಮೇಶ್ ಅಲಿಯಾಸ್ ಜಾಕಿ ಯನ್ನು ವಶಕ್ಕೆ ಪಡೆದು ವಿಚಾರಣೆಗೆ ನಡೆಸಿದ್ದರು. ಇನ್ನು ಈ ವಿಚಾರಣೆ ಸಂಬಂಧ ಕಳೆದ ರಾತ್ರಿ ಸುಮಾರು 12.45ರ ಸಮಯದಲ್ಲಿ ಆರೋಪಿ ರಮೇಶ್ ನನ್ನು ಕರೆದುಕೊಂಡು ತನಿಖಾಧಿಕಾರಿ ಸಿಬಿಐ ವಸಂತ್, ಪಿಎಸ್ ಐ ಪ್ರಕಾಶ್ ಹಾಗೂ ಸಿಬ್ಬಂದಿಗಳು ತನಿಖೆಗೆ ಸಂಬಂಧಪಟ್ಟಂತೆ ಚನ್ನಪಟ್ಟಣ ತಾಲೂಕು ಚಿಕ್ಕಮಳೂರು ಗ್ರಾಮಕ್ಕೆ ಹೋಗುತ್ತಿರುವಾಗ, ಆರೋಪಿಯು ಪೊಲೀಸ್ ವಶದಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ಹಿಡಿಯಲು ಹೋದ ಹೆಡ್ ಕಾನ್ಸಟೆಬಲ್ ನಾಗರಾಜ್ ಅವರ ಮೇಲೆ ಆರೋಪಿ ರಮೇಶ್ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಈ ಕೂಡಲೇ ಎಚ್ಚೆತ್ತ ಸಿಪಿಐ ವಸಂತ್ ಕುಮಾರ್ ರವರು ಪ್ರಾಣ ರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ. ಹಲ್ಲೆಗೆ ಒಳಗಾದ ಹೆಡ್ ಕಾನ್ಸಟೆಬಲ್ ನಾಗರಾಜ್ ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಕಾಲಿಗೆ ಗಾಯಗೊಂಡ ಆರೋಪಿಯು ವಿಕ್ಟೋರಿಯಾ ಆಸ್ಪತ್ರೆ