ನಾಗಮಂಗಲ ಕೈಗಾರಿಕಾ ಪ್ರದೇಶ ಭೂಸ್ವಾಧೀನಕ್ಕೆ ಮತ್ತೊಮ್ಮೆ ಸರ್ವೇಗೆ ಸಚಿವರ ಸೂಚನೆ
Posted by editor on in Category
08
49

ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನಲ್ಲಿ ಉದ್ದೇಶಿತ ಕೈಗಾರಿಕಾ ಪ್ರದೇಶ ಅಭಿವೃದ್ದಿಗೆ ಅಗತ್ಯವಿರುವ ಭೂಮಿ ಸ್ವಾಧೀನಕ್ಕೆ ಮತ್ತೊಮ್ಮೆ ಸರ್ವೇ ಮಾಡಿಸುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಸೂಚನೆ ನೀಡಿದ್ದಾರೆ.
ಖನಿಜ ಭವನದ ಉದ್ಯೋಗ ಮಿತ್ರ ಸಭಾಂಗಣದಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ನೇತೃತ್ವದ ಜನಪ್ರತಿನಿಧಿಗಳ ನಿಯೋಗ ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಈ ಸೂಚನೆ ನೀಡಿದರು. ನೀರಾವರಿ ಸೌಲಭ್ಯದಿಂದ ಕೃಷಿ ಮಾಡುತ್ತಿರುವ ಜಮೀನಿನ ಸ್ವಾಧೀನ ಪ್ರಕ್ರಿಯೆ ಸರಿಯಲ್ಲ. ಆ ಜಾಗ ಬಿಟ್ಟು ಶುಷ್ಕ ಪ್ರದೇಶದ ಜಮೀನು ಸ್ವಾಧೀನ ಪಡಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಆ ಭಾಗದ ರೈತರು ಹಾಗೂ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಬೇಕು ಮತ್ತು ಇನ್ನೊಮ್ಮೆ ಸರ್ವೇ ಕಾರ್ಯ ನಡೆಸಬೇಕು ಎಂದು ಸೂಚನೆ ನೀಡಿದರು. ಇದಕ್ಕೂ ಮುನ್ನ ಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ನಾಗಮಂಗಲ ತಾಲ್ಲೂಕಿನಲ್ಲಿ ಕೈಗಾರಿಕೆಗಳು ಬರುವ ಅಗತ್ಯ ಇದೆ. ಆದರೆ ಅಭಿವೃದ್ದಿ ಹೊಂದಿರುವ ನೀರಾವರಿ ಜಮೀನನ್ನು ಈ ಉದ್ದೇಶಕ್ಕೆ ಸ್ವಾಧೀನ ಪಡಿಸಿಕೊಳ್ಳುವುದು ಬೇಡ ಎಂದರು. ಇದೇ ವೇಳೆ ನಾಗಮಂಗಲ ಹಾಗೂ ಮಾಗಡಿ ವಿಧಾನಸಭಾ ಕ್ಷೇತ್ರಗಳಲ್ಲಿ ಕೈಗಾರಿಕೆಗಳ ಅಭಿವೃದ್ದಿಗೆ ಅವಕಾಶ ಇರುವ ಪ್ರದೇಶಗಳ ಬಗ್ಗೆ ನಾಗಮಂಗಲ ಶಾಸಕ ಸುರೇಶ್ ಗೌಡ, ಮಾಗಡಿ ಶಾಸಕ ಎ ಮಂಜುನಾಥ್ ಸಚಿವರಿಗೆ ಮಾಹಿತಿ ನೀಡಿದರು. ಕೂಡಲೇ ಅಧಿಕಾರಿಗಳನ್ನು ಸರ್ವೇ ಕಾರ್ಯಕ್ಕೆ ಕಳುಹಿಸಿ ಕೊಡುವಂತೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಸಚಿವ ಶೆಟ್ಟರ್ ಸ್ಥಳದಲ್ಲೇ ಅಧಿಕಾರಿಗಳಿಗೆ ಅಗತ್ಯವಿರುವ ಕ್ರಮಗಳನ್ನು ಕ