ಸಿಎಸ್ಆರ್ ಅನುದಾನದಡಿ ನಿರ್ಮಿಸಿದ್ದ ಕಟ್ಟಡ ಉದ್ಘಾಟನೆ
Posted by editor on in Category
08
49

ದೇವನಹಳ್ಳಿ: ಬಿದಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಿಎಸ್ಆರ್ ನಿಧಿಯಿಂದ ನಿರ್ಮಿಸಿದ್ದ ಕಟ್ಟಡವನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಉದ್ಘಾಟಿಸಿದರು.
ನಂತರ ಅವರು ಮಾತನಾಡಿ, ಜಿಲ್ಲೆಯ ಅಭಿವೃದ್ಧಿಗೆ ಸಿಎಸ್ ಆರ್ ಅನುದಾನ ಪ್ರಮುಖವಾಗದ ಪಾತ್ರ ವಹಿಸುತ್ತಿದೆ.ಅಭಿವೃದ್ದಿಗೆ ಪ್ರತಿಷ್ಠಿತ ಕಂಪನಿಗಳು ಮುಂದಾಗುತ್ತಿರುವುದು ಸಂತಸ ತಂದಿದೆ ಎಂದರು. ಬಿದಲೂರು ಗ್ರಾಮ ಪಂಚಾಯತಿಯ ಅಧ್ಯಕ್ಷ ಎಸ್.ಪಿ ಮುನಿರಾಜು. ಗ್ರಾಮ ಪಂಚಾಯತಿ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.