ಹವಾಮಾನ ಕ್ರಿಯಾಯೋಜನೆಯಿಂದ ರಾಜಧಾನಿಯ ಸಮಸ್ಯೆಗೆ ಪರಿಹಾರ: ಎಸಿಎಸ್ ರಾಕೇಶ್ ಸಿಂಗ್
Posted by editor on in Category
08
49

ಬೆಂಗಳೂರು: ಬೆಂಗಳೂರು ಹವಾಮಾನ ಕ್ರಿಯಾ ಯೋಜನೆ ಅನುಷ್ಠಾನಕ್ಕೆ ಸರ್ಕಾರದ ಜೊತೆ ನಾಗರಿಕರು ಸಹ ಕೈಜೋಡಿಸಿದರೆ ತ್ವರಿತವಾಗಿ ಗುರಿ ತಲುಪಲು ಸಾಧ್ಯವಾಗುತ್ತದೆ ಎಂದು ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ತಿಳಿಸಿದರು.ಬೆಂಗಳೂರು ಹವಾಮಾನ ಕ್ರಿಯಾ ಯೋಜನೆ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ವಿಕಾಸಸೌಧ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾರ್ಯಗಾರದಲ್ಲಿ ಅವರು ಮಾತನಾಡಿದರು.
ಬೆಂಗಳೂರು 1980-1990ರಲ್ಲಿ ಯೋಜನಾ ರಹಿತವಾಗಿ ಅಭಿವೃದ್ಧಿಯಾಗುತ್ತಿತ್ತು. ಇದೀಗ ಯೋಜನಾಬದ್ಧವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಇದೇ ರೀತಿ ವ್ಯವಸ್ಥಿತವಾಗಿ ಅಭಿವೃದ್ಧಿ ಕಾರ್ಯಗಳು ನಡೆಸಿದಾಗ ಹಂತ-ಹಂತವಾಗಿ ಹವಾಮಾನದಲ್ಲಿ ಪರಿಣಾಮಕಾರಿಯಾಗಿ ಗುಣಮಟ್ಟವನ್ನು ತರುವಲ್ಲಿ ಯಶಸ್ವಿಯಾಗಬಹುದಾಗಿದೆ ಎಂದರು.