ಹವಾಮಾನ ಗುಣಮಟ್ಟದಲ್ಲಿ ಬೆಂಗಳೂರು ದೇಶದಲ್ಲೇ ಮೇಲುಗೈ: ಎಂ.ವಿ.ರಾಜೀವ್ ಗೌಡ
Posted by editor on in Category
08
49

ಬೆಂಗಳೂರು: ಯೋಜನಾ ರಹಿತ ಅಭಿವೃದ್ಧಿಯಿಂದ ನಗರದಲ್ಲಿ ಸಾಕಷ್ಟು ಸಮಸ್ಯೆಗಳು ಉದ್ಭವಿಸಿದ್ದು, ಅವೆಲ್ಲವನ್ನೂ ತಡೆಯಬೇಕಿದೆ. ಹವಾಮಾನ ಕ್ರಿಯಾ ಯೋಜನೆ ಅನುಷ್ಟಾನ ಸಂಬಂಧ ಎಲ್ಲ ರೀತಿಯ ಸಹಕಾರವನ್ನು ಸರ್ಕಾರ ನೀಡಲಿದೆ ಎಂದು ಕರ್ನಾಟಕ ರಾಜ್ಯ ಪರಿವರ್ತನಾ ಸಂಸ್ಥೆ(ಕರ್ನಾಟಕ ರಾಜ್ಯ ಯೋಜನಾ ಮಂಡಳಿ) ಉಪಾಧ್ಯಕ್ಷ ಎಂ.ವಿ. ರಾಜೀವ್ ಗೌಡ ತಿಳಿಸಿದರು.
ಬೆಂಗಳೂರು ಹವಾಮಾನ ಕ್ರಿಯಾಯೋಜನೆ ಅನುಷ್ಠಾನಕ್ಕೆ ಬರುತ್ತಿರುವುದು ಸಂತಸದ ಸಂಗತಿ. ಮುಂಬರುವ ದಿನಗಳಲ್ಲಿ ನಮ್ಮ ಬೆಂಗಳೂರು ದೇಶದಲ್ಲೇ ಹವಾಮಾನ ಗುಣಮಟ್ಟದಲ್ಲಿ ಮೇಲುಗೈ ಸಾಧಿಸಲಿದೆ ಎಂದು ತಿಳಿಸಿದರು. ನಗರದಲ್ಲಿ ಕುಡಿಯುವ ನೀರು, ವಾಯು ಗುಣಮಟ್ಟ ಹಾಗೂ ಸಂಚಾರ ದಟ್ಟಣೆ ಸಮಸ್ಯೆಗಳಿಂದ ಕೂಡಿದ್ದು, ಅವೆಲ್ಲವನ್ನೂ ಬಗೆಹರಿಸಬೇಕಿದೆ. ಹವಾಮಾನ ಕ್ರಿಯಾ ಯೋಜನೆಯು ಈ ಸಮಸ್ಯೆಯನ್ನು ಬಗೆಹರಿಸಲು ಸೂಕ್ತ ವೇದಿಕೆಯಾಗಿದೆ ಎಂದು ಹೇಳಿದರು. ಬೆಂಗಳೂರು ಹವಾಮಾನ ಕ್ರಿಯಾಯೋಜನೆ ಅನುಷ್ಠಾನಕ್ಕೆ ಬರುತ್ತಿರುವುದು ಸಂತಸದ ಸಂಗತಿ. ಮುಂಬರುವ ದಿನಗಳಲ್ಲಿ ನಮ್ಮ ಬೆಂಗಳೂರು ದೇಶದಲ್ಲೇ ಹವಾಮಾನ ಗುಣಮಟ್ಟದಲ್ಲಿ ಮೇಲುಗೈ ಸಾಧಿಸಲಿದೆ ಎಂದು ತಿಳಿಸಿದರು. ನಗರದಲ್ಲಿ ಕುಡಿಯುವ ನೀರು, ವಾಯು ಗುಣಮಟ್ಟ ಹಾಗೂ ಸಂಚಾರ ದಟ್ಟಣೆ ಸಮಸ್ಯೆಗಳಿಂದ ಕೂಡಿದ್ದು, ಅವೆಲ್ಲವನ್ನೂ ಬಗೆಹರಿಸಬೇಕಿದೆ. ಹವಾಮಾನ ಕ್ರಿಯಾ ಯೋಜನೆಯು ಈ ಸಮಸ್ಯೆಯನ್ನು ಬಗೆಹರಿಸಲು ಸೂಕ್ತ ವೇದಿಕೆಯಾಗಿದೆ ಎಂದು ಹೇಳಿದರು.