ವ್ಯಂಗ್ಯ ಚಿತ್ರಕಾರರ ಕಾರ್ಯಾಗಾರ, ಪ್ರದರ್ಶನಕ್ಕೆ ಚಾಲನೆ
Posted by editor on in Category
08
49

ಬೆಂಗಳೂರು: ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿವತಿಯಿಂದ ಲೋಕಸಭಾ ಸಾರ್ವತ್ರಿಕ ಚುನಾವಣೆ ಅಂಗವಾಗಿ ಮತದಾರರ ಜಾಗೃತಿಗಾಗಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ವ್ಯಂಗ್ಯ ಚಿತ್ರಕಾರರ ಕಾರ್ಯಾಗಾರ ಮತ್ತು ಪ್ರದರ್ಶನಕ್ಕೆ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಚಾಲನೆ ನೀಡಿ ವೀಕ್ಷಿಸಿದರು.
ವಿಧಾನಸೌಧ ಪೂರ್ವ ದಿಕ್ಕಿನ ಬಸವಣ್ಣನ ಪ್ರತಿಮೆಯ ಮುಂಭಾಗ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಲು ಮುಖ್ಯ ಚುನಾವಣಾಧಿಕಾರಿ ಕಚೇರಿಯಿಂದ ವ್ಯಂಗ್ಯಚಿತ್ರಗಳನ್ನು ಆಹ್ವಾನಿಸಲಾಗಿತ್ತು. ಅದರಂತೆ ಕಲಾವಿದರು, ವ್ಯಂಗ್ಯಚಿತ್ರಕಾರರು, ಹವ್ಯಾಸಿ ಕಲಾವಿದರು ಸೇರಿದಂತೆ ವಿದ್ಯಾರ್ಥಿಗಳು ಈ ಅಭಿಯಾನದಲ್ಲಿ ಪಾಲ್ಗೊಂಡಿದ್ದರು. ಆಯ್ಕೆಯಾದ ಚಿತ್ರಗಳನ್ನು ವಿಶೇಷ ಕಾರ್ಯಕ್ರಮದ ಮೂಲಕ ಪ್ರದರ್ಶನ ಮಾಡಲಾಯಿತು. ಜಾಗೃತಿ ಮೂಡಿಸುವ ಅತ್ಯುತ್ತಮ 25 ಚಿತ್ರಗಳನ್ನು ಮುಖ್ಯ ಚುನಾವಣಾ ಆಯೋಗದಿಂದ ಮತದಾನದ ಜಾಗೃತಿಗಾಗಿ ಪ್ರಚಾರಕ್ಕಾಗಿ ಬಳಸಿಕೊಳ್ಳಲಾಗುವುದು. ಚುನಾವಣಾ ವಿಭಾಗದ ವಿಶೇಷ ಆಯುಕ್ತ ಆರ್. ರಾಮಚಂದ್ರನ್, ಸ್ವೀಪ್ ನೋಡಲ್ ಅಧಿಕಾರಿ ಪಿ.ಎನ್ ವಸ್ತ್ರದ್, ಮಾಹಿತಿ ತಂತ್ರಜ್ಞಾನದ ವಿಶೇಷ ಅಧಿಕಾರಿ ಸೂರ್ಯ ಸೇನ್ ಉಪಸ್ಥಿತರಿದ್ದರು.