ಮೈಶುಗರ್ ಕಾರ್ಖಾನೆಯಲ್ಲಿ 1.68 ಲಕ್ಷ ಕ್ವಿಂಟಲ್ ಸಕ್ಕರೆ ಉತ್ಪಾದನೆ: ಚಲುವರಾಯಸ್ವಾಮಿ
Posted by editor on in Category
08
49

ಮಂಡ್ಯ: ಜಿಲ್ಲೆಗೆ ಮುಕುಟದಂತಿರುವ ಮೈಸೂರು ಸಕ್ಕರೆ ಕಾರ್ಖಾನೆಯ ಪುನಶ್ಚೇತನಕ್ಕೆ ಮತ್ತು ಅಭಿವೃದ್ಧಿಗೆ ಸರ್ಕಾರ ಬದ್ದವಾಗಿದ್ದು, ಸಕ್ಕರೆ ಕಾರ್ಖಾನೆಯ ಪುನಶ್ಚೇತನಕ್ಕೆ ರೂ 50 ಕೋಟಿ ಅನುದಾನ ನೀಡಿದೆ. ಜಿಲ್ಲೆಯ ರೈತರ ಮತ್ತು ಜನಪ್ರತಿನಿಧಿಗಳ ಸಹಕಾರದಿಂದ 2.41 ಲಕ್ಷ ಮೆಟ್ರಿಕ್‌ಟನ್ ಕಬ್ಬನ್ನು ನುರಿಸಿ ಈಗಾಗಲೇ 1.68 ಲಕ್ಷ ಕ್ವಿಂಟಾಲ್ ಸಕ್ಕರೆಯನ್ನು ಉತ್ಪಾದಿಸಲಾಗಿರುತ್ತದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದರು.
ಮಂಡ್ಯ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ 75ನೇ ಗಣರಾಜ್ಯೋತ್ಸವದಲ್ಲಿ ಧ್ವಾಜಾರೋಹಣ ನೆರವೇರಿಸಿ ಮಾತನಾಡಿದರು. ನಮ್ಮ ದೇಶವನ್ನು ಬ್ರಿಟಿಷರ ಕಪಿಮುಷ್ಠಿಯಿಂದ 1947 ಆಗಸ್ಟ್ 15 ರಂದು ಮುಕ್ತಿಗೊಳಿಸಿದರೂ ಸಹಾ ಭಾರತೀಯರೆಲ್ಲರಿಗೂ ನಮ್ಮದೇ ಆದ ಆಡಳಿತ ವ್ಯವಸ್ಥೆ ಮತ್ತು ಸಂವಿಧಾನ ಇರಲಿಲ್ಲ. ನಮ್ಮದೇ ಆದ ಭೌಗೋಳಿಕ ವ್ಯವಸ್ಥೆಗೆ ಸಂವಿಧಾನದ ಅಗತ್ಯತೆಯನ್ನು ಮನಗಂಡು ನಮ್ಮ ದೇಶಕ್ಕೆ ವಿಶ್ವದಲ್ಲಿಯೇ ಅತಿದೊಡ್ಡ ಸಂವಿಧಾನವನ್ನು ಜಾರಿಗೊಳಿಸಿದ ದಿನವಾದ ಜ.26 ರಂದು ಗಣರಾಜ್ಯೋತ್ಸವ ದಿನವನ್ನಾಗಿ ಭಾರತೀಯರಾದ ನಾವೆಲ್ಲರೂ ಹೆಮ್ಮೆಯಿಂದ ಆಚರಿಸುತ್ತೀದ್ದೇವೆ ಎಂದರು. ನಾವು ಒಕ್ಕೂಟ ವ್ಯವಸ್ಥೆಯಲ್ಲಿ ಇದ್ದು, ರಾಷ್ಟ್ರದ ಸಾರ್ವಭೌಮತೆಯನ್ನು ಗೌರವಿಸಿ, ಅದನ್ನು ಎತ್ತಿಹಿಡಿಯುತ್ತೇವೆ. ನಮ್ಮದೇ-ದೇಶ, ನಮ್ಮದೇ-ಸಂವಿಧಾನ, ನಮ್ಮದೇ-ಆಡಳಿತ, ನಾವು ಸ್ವತಂತ್ರರಾಗಿ ಬದುಕುತ್ತೇವೆ ಎನ್ನುವ ಶಪಥವನ್ನು ಕೈಗೊಂಡ ದಿನವೇ ಗಣರಾಜ್ಯ ದಿನ. ಈ ದಿನ ಸಮಸ್ತ ಭಾರತೀಯರಿಗೆ ನಮಗೆ ಅತ್ಯಂತ ಪವಿತ್ರ ದಿನವಾಗಿದೆ ಎಂದು ಹೇಳಿದರು. ಭಾರತೀಯರಾದ ನಾವೆಲ್ಲರೂ ಸಂವಿಧಾನದ ಮಹತ್ವವನ್ನು ಅರಿತುಕೊಳ್ಳಬೇಕಿದೆ. ಸಂವಿಧಾನದ ಮಹತ್ವ ಮತು ಅದರ ಪ್ರಾಮುಖ್ಯತೆಯನ್ನು ತಿಳಿಸುವ ಕುರಿತು ನಮ್ಮ ಸರ್ಕಾರ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಗಣರಾಜ್ಯ ದಿನದಂದೇ ರಾಜ್ಯಾದ್ಯಂತ ಚಾಲನೆ ನೀಡ