ಸಾರ್ವಜನಿಕ ಆಸ್ತಿಗೆ ಹಾನಿ: ಕಟ್ಟಡ ಮಾಲೀಕನ ವಿರುದ್ಧ ಬಿಬಿಎಂಪಿ ಕ್ರಮ
Posted by editor on in Category
08
49

ಬೆಂಗಳೂರು: ರಾಜರಾಜೇಶ್ವರಿ ನಗರ ವಲಯದ ಕೆಂಚೇನಹಳ್ಳಿ ಯ ಐಡಿಯಲ್ ಹೋಮ್ಸ್ ಪೆಟ್ರೋಲ್ ಬ್ಯಾಂಕ್ ಬಳಿ ಅನಧಿಕೃತವಾಗಿ ಕಟ್ಟಡ ನಿರ್ಮಾಣ ಕಾರ್ಯ ಕೈಗೊಂಡು ಸಾರ್ವಜನಿಕ ಆಸ್ತಿಗೆ ಹಾನಿಮಾಡಿದವರ ವಿರುದ್ಧ ಬಿಬಿಎಂಪಿ ಕ್ರಮ ಕೈಗೊಂಡಿದೆ.
ಮಂಜೇಗೌಡ ಎಂಬುವವರು ಕಟ್ಟಡ ನಿರ್ಮಿಸಲು ನಕ್ಷೆ ಮಂಜೂರಾತಿ ಪಡೆಯದೆ ಸುಮಾರು 6-8 ಅಡಿ ಆಳ ತಳಪಾಯದ(Earth Work Excavation) ಕಾಮಗಾರಿಯನ್ನು ಮಾಡುತ್ತಿದ್ದರು. ಇದರಿಂದ ಸುಮಾರು 70 ಅಡಿ ಉದ್ದ ಪಾದಚಾರಿ ರಸ್ತೆ ಹಾಗೂ ಒಳಚರಂಡಿಯು ಕುಸಿದು ಬಿದ್ದು, ಸಾರ್ವಜನಿಕರು ಓಡಾಡಲು ತೊಂದರೆಯಾಗಿದೆ. ಅಲ್ಲದೇ ಒಳಚರಂಡಿ ಮುಂಭಾಗದಲ್ಲಿರುವ ಬಿ.ಎಂ.ಟಿ.ಸಿ ಬಸ್ ನಿಲ್ದಾಣವು ಸಹ ಕುಸಿಯುವ ಸಂಭವವಿದೆ. ಇದರಿಂದ ಇಲಾಖೆಗೆ ಸರಿ ಸುಮಾರು 20 ಲಕ್ಷ ರೂ.ಗಳವರೆಗೂ ನಷ್ಟ ಉಂಟಾಗಿದೆ. ಅಲ್ಲದೇ ಕಟ್ಟಡ ಕಾಮಗಾರಿ ವೇಳೆ ಯಾವುದೇ ಮುಂಜಾಗೃತ ಕ್ರಮ ಅನುಸರಿಸದೆ ಕಾಮಗಾರಿ ಮಾಡುತ್ತಿರುವುದರಿಂದ ಅಕ್ಕ-ಪಕ್ಕದ ಮನೆಗಳಿಗೂ ಸಹ ಹಾನಿಯಾಗುವ ಸಾಧ್ಯತೆಯಿರುವುದರಿಂದ ಸದರಿ ಕಟ್ಟಡ ಮಾಲೀಕರ ಮೇಲೆ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಿಸಲಾಗಿದೆ.