12 ರಂದು ಉತ್ತರ ಕರ್ನಾಟಕ ಬನ್ನಿ ಬಂಗಾರ ಕಾರ್ಯಕ್ರಮ
Posted by editor on in Category
08
49

ಬೆಂಗಳೂರು: ನಗರದಲ್ಲಿರುವ ಉತ್ತರ ಕರ್ನಾಟಕದ ಜನರು ಒಂದೆಡೆ ಸೇರಿ ಪ್ರತಿ ವರ್ಷದಂತೆ ಈ ವರ್ಷವೂ ಅ. 12 ರಂದು ಬನ್ನಿ ಬಂಗಾರ ಹಬ್ಬವನ್ನು ಆಚರಿಸಲಿದ್ದಾರೆ.
ಸದ್ಗುರು ಶ್ರೀ ಶಂಕರಾನಂದ ಮಹಾಸ್ವಾಮಿಗಳು ಬ್ರಹ್ಮ ವಿದ್ಯಾಶ್ರಮ ಶ್ರೀ ಸಿದ್ಧಾರೂಢ ಮಠ ಚಳಕಾಪುರ ಪೂಜ್ಯರು ಸಾನಿಧ್ಯ ವಹಿಸಲಿದ್ದಾರೆ. ಎಂ.ಎಸ್.ಎಂ.ಇ. ನಿರ್ದೇಶಕ ನಿತೇಶ್ ಪಾಟೀಲ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕೆ ಎ ಎಸ್ ಅಧಿಕಾರಿಗಳ ಸಂಘದ ಕಾರ್ಯದರ್ಶಿ ಸಿ.ಎಲ್. ಶಿವಕುಮಾರ್, ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯ ಅಧಿಕಾರಿ ರಮೇಶ್ ಕೋನರೆಡ್ಡಿ, ಹರೀಶ್ ನಾಯಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ.ಬಿ.ಜಿ.ಅವಟಿ ವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ವಿವಿಧ ಬಡಾವಣೆಯ ಉತ್ತರ ಕರ್ನಾಟಕದ ಸಂಘಗಳ ಅಧ್ಯಕ್ಷರು/ಕಾರ್ಯದರ್ಶಿಗಳು, ಗಣ್ಯರು, ಸಮಾಜ ಸೇವಕರು, ಗುರು ಹಿರಿಯರು ಭಾಗವಹಿಸಲಿದ್ದಾರೆ ಎಂದು ಉತ್ತರ ಕರ್ನಾಟಕ ನಾಗರಿಕ ಅಭಿವೃದ್ಧಿ ಸಂಘದ ಅಧ್ಯಕ್ಷ ಡಾ.ಬಿ.ಜಿ. ಅವಟಿ ತಿಳಿಸಿದ್ದಾರೆ.