ಹಬ್ಬದ ಘನತ್ಯಾಜ್ಯ ಸಮರ್ಪಕ ನಿರ್ವಹಣೆಗೆ ಬಿಬಿಎಂಪಿ ಮಾರ್ಗಸೂಚಿ
Posted by editor on in Category
08
49

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹೆಚ್ಚುವರಿ ತ್ಯಾಜ್ಯ, ಉತ್ಪತ್ತಿಯಾಗಲಿದ್ದು ಹಬ್ಬ ಹಾಗೂ ನಂತರ ಘನತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡಲು ಬಿಬಿಎಂಪಿ ಮಾರ್ಗಸೂಚಿ ಪ್ರಕಟಿಸಿದೆ
ಬಾಳೇಕಂದು, ಮಾವಿನ ಎಲೆ, ಹೂವು ಹಾಗೂ ಇತರೆ ಹಬ್ಬದ ವಸ್ತುಗಳನ್ನು ಮಾರಾಟ ಮಾಡುವ ವ್ಯಾಪಾರಿಗಳು ವಿಶೇಷವಾಗಿ ಮಾರುಕಟ್ಟೆಗಳಲ್ಲಿ ಹಸಿ ಮತ್ತು ಒಣ ತ್ಯಾಜ್ಯವನ್ನು ವಿಂಗಡಿಸಿ ನೀಡಬೇಕು. ವ್ಯಾಪಾರಿಗಳು ಏಕ ಬಳಕೆ ಪ್ಲಾಸ್ಟಿಕ್‌ಗಳನ್ನು ಬಳಸದಂತೆ ನಿಗಾವಹಿಸಲು ವಾರ್ಡ್‌ಗಳಲ್ಲಿ ಘನತ್ಯಾಜ್ಯ ಆರೋಗ್ಯ ಅಧಿಕಾರಿಗಳ ಮತ್ತು ಮಾರ್ಷಲ್‌ಗಳು ತಂಡಗಳನ್ನು ರಚಿಸಿ ದಿನಂಪ್ರತಿ ಪರಿವೀಕ್ಷಣೆ ಕೈಗೊಂಡು ಪ್ಲಾಸ್ಟಿಕ್ ಮಾರಾಟ / ಬಳಕೆದಾರರಿಗೆ ನಿಯಮಾನುಸಾರ ದಂಡ ವಿಧಿಸಿ ಪ್ಲಾಸ್ಟಿಕ್ ವಶಪಡಿಸಿಕೊಂಡು ಮರುಬಳಕೆಯಾಗದಂತೆ ಅಗತ್ಯ ಕ್ರಮಕೈಗೊಳ್ಳಬೇಕು. ಉತ್ಪತ್ತಿಯಾಗುವ ಹೆಚ್ಚುವರಿ ತ್ಯಾಜ್ಯವನ್ನು ಸಂಪೂರ್ಣವಾಗಿ ಸಂಗ್ರಹಿಸಿ, ವಿಲೇವಾರಿಗೆ ಅಗತ್ಯ ಕ್ರಮಕೈಗೊಳ್ಳಬೇಕು. ಬ್ಲಾಕ್‌ಸ್ಪಾಟ್(ಕಸ ಸುರಿಯುವ ಸ್ಥಳ)ಗಳಲ್ಲಿ ಕಸದಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ವಿಶೇಷ ಗಮನ ಹರಿಸಬೇಕು. ಮಾರುಕಟ್ಟೆಗಳು ಮತ್ತು ಇತರೆ ಸಾರ್ವಜನಿಕ ಸ್ಥಳಗಳ ಬ್ಲಾಕ್ ಸ್ಪಾಟ್ ಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಲು ಕ್ರಮಕೈಗೊಳ್ಳಬೇಕು. ಹಸಿ ತ್ಯಾಜ್ಯವನ್ನು ವಾರ್ಡ್‌ಗಳಲ್ಲಿಯೇ ಹಸಿ / ತೋಟಗಾರಿಕೆ ತ್ಯಾಜ್ಯ ಸಂಸ್ಕರಣಾ ಸೌಲಭ್ಯ ಬಳಸಿ ವಿಲೇವಾರಿ ಮಾಡಬೇಕು ಎಂದು ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ತಿಳಿಸಿದ್ದಾರೆ.