ಈ ದಸರಾ ಸಾಂಸ್ಕೃತಿಕ ಚಳವಳಿಯ ಪ್ರತಿಬಿಂಬ: ಡಾ.ಹೆಚ್.ಸಿ.ಮಹದೇವಪ್ಪ
Posted by editor on in Category
08
49

ಮೈಸೂರು: ಸಂಗೀತ, ಸಾಹಿತ್ಯ, ಕಲೆ, ಕೃಷಿ, ಹೈನುಗಾರಿಗೆ, ಕ್ರೀಡೆ, ಮಹಿಳೆಯರ ಕೊಡುಗೆಗಳು, ಜನರ ಜೀವನ ಕ್ರಮ ಹಾಗೂ ಮೌಲ್ಯಗಳು ಅಭಿವ್ಯಕ್ತಿಯಾದ ಈ ಬಾರಿಯ ದಸರಾವು ಸಾಂಸ್ಕೃತಿಕ ಚಳಿವಳಿಯಾಗಿ ನಡೆಯಿತು ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಹೇಳಿದರು.
ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಗರದ ಕುಪ್ಪಣ್ಣ ಉದ್ಯಾನದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ಆಯೋಜಿಸಿದ್ದ “ದಸರಾ ಫಲಪುಷ್ಪ ಪ್ರದರ್ಶನ”ದಲ್ಲಿ ಅತ್ಯುತ್ತಮ ಉದ್ಯಾನ ವಿನ್ಯಾಸಕಾರ ಪ್ರಶಸ್ತಿ ವಿತರಿಸಿ ಮಾತನಾಡಿದರು. ರಾಜ್ಯದಲ್ಲಿ ಉತ್ತಮವಾಗಿ ಮಳೆಯಾದ ಕಾರಣ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅದ್ದೂರಿ ದಸರಾ ಆಚರಿಸುವಂತೆ ತಿಳಿಸಿದ್ದರು. ಅದರಂತೆ ಜನರಲ್ಲಿ ಸಹೋದರತೆ, ಸೌಹಾರ್ದತೆ, ಘನತೆಯ ಬದುಕನ್ನು ಬಿತ್ತುವಂತೆ ಈ ಬಾರಿಯ ದಸರಾವನ್ನು ಆಚರಿಸಲಾಗಿದೆ. ಧರ್ಮ, ಜಾತಿಗೂ ಮೀರಿದ ಸಮಾಜವನ್ನು ನಿರ್ಮಿಸುವ ಸಂದೇಶ ಸಾರಲಾಗಿದೆ ಎಂದರು. ಈ ಬಾರಿಯ ದಸರಾ ವಿಭಿನ್ನವಾಗಿತ್ತು ಎಂಬ ಉತ್ತಮ ಅಭಿಪ್ರಾಯ ಜನರಿಂದ ಕೇಳಿಬಂದಿದೆ. ದಸರಾ ಕಣ್ತುಂಬಿಕೊಳ್ಳಲು ಜನಸಾಗರವೇ ಹರಿದುಬಂದಿದ್ದು, ಜನರು ಕೂಡ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದರಿಂದ ಜನರ ದಸರಾವಾಗಿ ಪರಿಣಮಿಸಿದೆ. ದಸರಾ ಯಶಸ್ಸಿಗೆ ಮೈಸೂರಿನ ಎಲ್ಲಾ ಜನತೆ ಕಾರಣೀಭೂತರಾಗಿದ್ದಾರೆ. ಈ ಯಶಸ್ವಿ ದಸರಾ ಆಚರಣೆ ಮೂಲಕ ರಾಜ್ಯ ಸರ್ಕಾರಕ್ಕೆ ಸಾಂಸ್ಕೃತಿಕ ಕಿರೀಟ ಇಟ್ಟಂತಾಗಿದೆ ಎಂದು ಹೇಳಿದರು. ತೋಟಗಾರಿಕೆ ಇಲಾಖೆಯಿಂದ ಫಲಪುಷ್ಟ ಪ್ರದರ್ಶನವನ್ನು ಅತ್ಯಂತ ಅಚ್ಚುಕಟ್ಟಾಗಿ ಆಯೋಜನೆ ಮಾಡಲಾಗಿದೆ. ವಿವಿಧ ಪುಷ್ಪಗಳು ಹಾಗೂ ಸಿರಿಧಾನ್ಯಗಳಿಂದ ಬಗೆಬಗೆಯ ಕಲಾ ಪ್ರಕಾರಗಳನ್ನು ರಚಿಸಿ ಜನರ ಮೆಚ್ಚುಗೆ