ರಾಜಕಾಲುವೆ ಒತ್ತುವರಿ ನಿರ್ದಾಕ್ಷಿಣ್ಯ ತೆರವು ಮಾಡಿ : ಡಿ.ಕೆ.ಶಿವಕುಮಾರ್ ಆದೇಶ
Posted by editor on in Category
08
49

ಬೆಂಗಳೂರು: ನಗರದಾದ್ಯಂತ ಮುಲಾಜಿಲ್ಲದೆ ರಾಜಕಾಲುವೆ ಒತ್ತುವರಿ ತೆರವಿಗೆ ಸೂಚನೆ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.
ಅನೇಕ ಕಡೆ ಖಾಸಗಿಯವರು ರಾಜಕಾಲುವೆ ಒತ್ತುವರಿ ತೆರವುಗೊಳಿಸದಂತೆ ನ್ಯಾಯಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಇವರು ಕೆಲಸ ಮಾಡಲು ಬಿಡುತ್ತಿಲ್ಲ. ತುರ್ತು ಸಂದರ್ಭದಲ್ಲಿ ಇವುಗಳಿಗೆ ಅವಕಾಶವಿಲ್ಲ. ತೆರವುಗೊಳಿಸಲು ಕಾನೂನಿನಲ್ಲಿ ಅವಕಾಶವಿದೆ. ಕೂಡಲೇ ಎಲ್ಲಾ ಒತ್ತುವರಿಗಳನ್ನು ತೆರವುಗೊಳಿಸಿ ಹಾಗೂ ಪ್ರವಾಹ ಪರಿಸ್ಥಿತಿ ನಿರ್ವಹಣೆಯಡಿ ಕೂಡಲೇ ಆದೇಶ ಹೊರಡಿಸಿ ಎಂದು ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದೇನೆ. ಜೊತೆಗೆ ಬಿಡಿಎ ಮತ್ತು ಬಿಬಿಎಂಪಿಗೂ ಸೂಚನೆ ನೀಡಿದ್ದೇನೆ. ಯಾರೇ ಖಾಸಗಿಯವರು ಅಡ್ಡಿ ಪಡಸಿದರೂ ನಾವು ನಮ್ಮ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು. ನ್ಯಾಯಲಯದ ಪ್ರಕರಣ ಮುಖ್ಯವಲ್ಲ, ನಮಗೆ ಸಾರ್ವಜನಿಕರ ಹಿತ ಮುಖ್ಯ. ನೀರು ಸರಾಗವಾಗಿ ಹರಿಯುವ ಕಡೆ ಒತ್ತುವರಿ ತೆರವುಗೊಳಿಸಲು ಕೂಡಲೇ ಕೆಲಸ ಮಾಡಬೇಕು ಎಂದು ಆದೇಶ ನೀಡಿದ್ದೇನೆ” ಎಂದರು. ಮಳೆ ನೀರುಗಾಲುವೆಗಳನ್ನು ಸ್ವಚ್ಚಗೊಳಿಸಿ ಸರಾಗವಾಗಿ ನೀರು ಹರಿಯುವಂತೆ ಮಾಡಲು ವಿಶ್ವಬ್ಯಾಂಕಿನಿಂದ 1 ಸಾವಿರ ಕೋಟಿ ಸಾಲ ಪಡೆದು ಈಗಾಗಲೇ ಕೆಲಸ ಮಾಡಲಾಗುತ್ತಿದೆ” ಎಂದು ತಿಳಿಸಿದರು. “ಯಲಹಂಕದ ಕೇಂದ್ರಿಯ ವಿಹಾರದಲ್ಲಿ 8 ಬ್ಲಾಕ್ ಗಳಿದ್ದು ಸುಮಾರು 600 ಕ್ಕೂ ಹೆಚ್ಚು ಫ್ಲಾಟ್ ಗಳಿವೆ. ಇವುಗಳನ್ನು ಸದ್ಯದ ಮಟ್ಟಿಗೆ ಬಿಬಿಎಂಪಿ ರಕ್ಷಣಾ ಕಾರ್ಯಕ್ಕಾಗಿ ಸುಪರ್ಧಿಗೆ ತೆಗೆದುಕೊಂಡಿದೆ ಎಂದರು.