ನಾಳೆ ಹೆಬ್ಬಾಳದಲ್ಲಿ ಮೇವು ಮೇಳ

ಬೆಂಗಳೂರು : ಮೇವು ಚಟುವಟಿಕೆಗಳ ಕುರಿತು ವಸ್ತು ಪ್ರದರ್ಶನ ಹಾಗೂ ತಜ್ಞರೊಂದಿಗೆ ಸಂವಾದ ನಡೆಸುವ 'ಮೇವು ಮೇಳ' ಕಾರ್ಯಕ್ರಮ ಅ. 25 ರಂದು ಬೆಳಿಗ್ಗೆ 10 ಗಂಟೆಗೆ ಹೆಬ್ಬಾಳದ ಪಶುವೈದ್ಯಕೀಯ ಕಾಲೇಜು, ಬಾಲಕರ ಹಾಸ್ಟೆಲ್ ಮೈದಾನದಲ್ಲಿ ನಡೆಯಲಿದೆ.
ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ, ಪಶುವೈದ್ಯಕೀಯ ಮಹಾವಿದ್ಯಾಲಯ, ಹೆಬ್ಬಾಳ ಮತ್ತು ಭಾರತೀಯ ಡೈರಿ ಅಸೋಸಿಯೇಷನ್-ದಕ್ಷಿಣ ವಲಯ ಇವರ ಸಂಯುಕ್ತ ಆಶ್ರಯದಲ್ಲಿ ಈ “ಮೇವು ಮೇಳ” ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಬೀದರ್ ಪಶು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಕೆ.ಸಿ.ವೀರಣ್ಣ ಅವರು ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ.ಜಗದೀಶ್, ಐ.ಸಿ.ಎ.ಆರ್-ಅಟಾರಿಯ ನಿರ್ದೇಶಕ ಡಾ.ವಿ.ವೆಂಕಟಸುಬ್ರಮಣಿಯನ್, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಆಯುಕ್ತ ಶ್ರೀರೂಪ ಅವರು ಭಾಗವಹಿಸುವರು.